ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ.

 ಹಾವೇರಿ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಶಾಸಕ ರುದ್ರಪ್ಪ ಲಮಾಣಿ ತಾಯಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.

ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಶಾಸಕ ರುದ್ರಪ್ಪ ಲಮಾಣಿ ಸ್ವಾಗತಿಸಿದರು.

ನಗರದ ಕೆಪಿಟಿಸಿಎಲ್ ಕಚೇರಿ ಎದುರು ಸೇರಿದ ಕನ್ನಡಾಭಿಮಾನಿಗಳು ಕನ್ನಡ ಜ್ಯೋತಿ ರಥಯಾತ್ರೆ ಆಗಮಿಸುತ್ತಿದ್ದಂತೆ ಜೈಕಾರ್ ಕೂಗಿದರು. ಸ್ವಾತಂತ್ರö್ಯ ಹೋರಾಟಗಾರ ಸಂಗೂರ ಕರಿಯಪ್ಪ ಪುತ್ಥಳಿಯಿಂದ ಆರಂಭವಾದ ಮೆರವಣಿಗೆ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಾಗಿ ಬಂದಿತು. ಡೊಳ್ಳಿನ ಮೇಳದ ಕಲಾವಿದರು, ಕನ್ನಡ ಶಲ್ಯ ಧರಿಸಿದ್ದ ಕನ್ನಡಾಭಿಮಾನಿಗಳು ಮತ್ತು ಕನ್ನಡ ಬಾವುಟ ಹಿಡಿದುಕೊಂಡಿದ್ದ ವಿದ್ಯಾರ್ಥಿಗಳು, ಎನ್‌ಸಿಸಿ ಶಿಬಿರಾರ್ಥಿಗಳು ಮೆರವಣಿಗೆಯುದ್ದಕ್ಕೂ ಸಾಗಿ ಬಂದರು.

ಹಾವೇರಿ ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತಿಸುವ ವೇಳೆ ಸಾಹಿತಿ ಸತೀಶ ಕುಲಕರ್ಣಿ ಅವರೊಂದಿಗೆ ಕನ್ನಡಾಭಿಮಾನಿಗಳು.

ಸಾಹಿತಿ ಸತೀಶ ಕುಲಕರ್ಣಿ, ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ, ತಹಶೀಲ್ದಾರ್ ಶರಣಮ್ಮ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಣ್ಣ ಸಾತೇನಹಳ್ಳಿ, ಸದಸ್ಯ ಸಂಜೀವಕುಮಾರ ನೀರಲಗಿ, ನಗರಸಭೆ ಆಯುಕ್ತ ಪರಶುರಾಮ ಛಲವಾದಿ, ಮುಖಂಡರಾದ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎA. ಮೈದೂರ, ಮಾದೇಗೌಡ ಗಾಜಿಗೌಡ್ರ, ಎಂ.ಎಸ್.ಕೋರಿಶೆಟ್ಟರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ತಾಲೂಕು ಘಟಕದ ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಹೋಬಳಿ ಘಟಕದ ಅಧ್ಯಕ್ಷೆ ಡಾ.ಗೀತಾ ಸುತ್ತಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಾವೇರಿ: ನಗರಕ್ಕೆ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು