ಪ್ರತಿ ಹಂತದಲ್ಲೂ ರೈತರು, ಸಾರ್ವಜನಿಕರ ಸಂಪರ್ಕ ಕೊಂಡಿಯಾಗಿ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ ; ಬಸವರಾಜ ಗುರಿಕಾರ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಮೂಕ ಪ್ರಾಣಿಗಳ ಸೇವೆ ಅನುಪಮ ಮತ್ತು ವಿಶೇಷವಾದ ವೃತ್ತಿಯಾಗಿದೆ, ಇದನ್ನು ನಿರ್ವಹಿಸಲು ವಿಶೇಷ ಚಾಕಚಕ್ಯತೆ ಬೇಕು. ಪ್ರತಿ ಹಂತದಲ್ಲೂ ರೈತರು, ಸಾರ್ವಜನಿಕರ ಸಂಪರ್ಕ ಕೊಂಡಿಯಾಗಿ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ರಾಷ್ಟ್ರೀಯ ಅಧ್ಯಕ್ಷರಾದ ಬಸವರಾಜ ಗುರಿಕಾರ ಹೇಳಿದರು.
ಅವರು ಕರ್ನಾಟಕ ರಾಜ್ಯ ಪಶುವೈದ್ಯಕೀಯ ಪರೀಕ್ಷಕರ ಸಂಘ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ಮತ್ತು ಜಿಲ್ಲಾ ಪಂಚಾಯತ, ಧಾರವಾಡ ಇವರ ಸಹಯೋಗದಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳು, ಜಾನುವಾರು ಅಧಿಕಾರಿಗಳು, ಹಿರಿಯ ಪಶುವೈದ್ಯಕೀಯ ಪರೀಕ್ಷಕರು, ಪಶುವೈದ್ಯಕೀಯ ಪರೀಕ್ಷಕರು ಮತ್ತು ಕಿರಿಯ ಪಶುವೈದ್ಯಕೀಯ ಪರೀಕ್ಷಕರುಗಳಿಗೆ ನಡೆದ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಸಂಘಗಳು ನೌಕರರ ಸಮಸ್ಯೆ ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕು. ಅಮತಹ ಕಾರ್ಯವನ್ನು ಮಾರ್ತಾಂಡಪ್ಪ ಕತ್ತಿ ಮಾಡುತ್ತಿದ್ದಾರೆ. ಜೊತೆಗೆ ನಿಮ್ಮ ಸಂಘದ ಪ್ರತಿ ಕಾರ್ಯಕ್ಕೂ ನಾವು ನಿಮ್ಮ ಜೊತೆಗೆ ಇದ್ದು ಕಾರ್ಯ ಮಾಡುತ್ತೇವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಸ್ ಎಫ್ ಸಿದ್ಧನಗೌಡರ ಮಾತನಾಡಿ ನೌಕರರ ಸಮಸ್ಯೆಗಳು, ಮತ್ತು ಹೋರಾಟಗಳಿಗೆ ಸಂಘದ ಬೆಂಬಲ ಸದಾ ಇರುತ್ತದೆ ಎಂದು ಹೇಳಿದರು. ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ ಮಾತನಾಡಿ ತಂತ್ರ್ಯಾಂಶಗಳು ನಮ್ಮ ಜೀವನದ ಭಾಗವಾಗಿವೆ. ದತ್ತಾಂಶಗಳ ಸಂಗ್ರಹಣೆಗೆ ತಂತ್ರಾAಶಗಳು ಅವಶ್ಯವಾಗಿವೆ. ಅವುಗಳನ್ನು ತಿಳಿದುಕೊಳ್ಳಲು ಇಂತಹ ಕಾರ್ಯಾಗಾರಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ಹೇಳಿದರು. ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜನಿಯರ್ಸ, ಲೋಕಲ್ ಸೆಂಟರ್ ಧಾರವಾಡದ ಅಧ್ಯಕ್ಷ ಸುನೀಲ ಬಾಗೇವಾಡಿ ಮಾತನಾಡಿದರು. ಪಶುವೈದ್ಯಕೀಯ ಪರೀಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಮ್ ಎಸ್ ಘಂಟೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರಿ ನೌಕರರ ಜಿಲ್ಲಾ ಸಂಘದ ಖಜಾಂಚಿ ಮಂಜುನಾಥ ಯಡಳ್ಳಿ, ಜಂಟಿ ನಿರ್ದೇಶಕರಾದ ಡಾ.ಆರ್ ಡಿ ಪಾಟೀಲ ಉಪಸ್ಥಿತರಿದ್ದರು. ಉಪನ್ಯಾಸಕರಾಗಿ ಆಗಮಿಸಿದ ಪಾಲಿಕ್ಲಿನಿಕ್ ಉಪನಿರ್ದೇಶಕರಾದ ಡಾ. ಆರ್.ಡಿ ಪಾಟೀಲ ಸಾಮಾನ್ಯ ರೋಗಗಳ ಮಾಹಿತಿ ಬಗ್ಗೆ ಹಾಗೂ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಉಮೇಶ ತಿರ್ಲಾಪೂರ ಅವರು ಇಲಾಖೆಯಲ್ಲಿ ಬಳಸುವ ತಂತ್ರಾAಶಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಪ್ರೇಮಾನಂದ ಶಿಂಧೆ ಪ್ರಾರ್ಥಿಸಿದರು. ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹುಬ್ಬಳ್ಳಿ ತಾಲೂಕಿನ ಕಾರ್ಯದರ್ಶಿ ಶಿಲ್ಪಾ ಬೆನ್ನೂರ ನಿರೂಪಿಸಿದರು. ಜಿಲ್ಲಾ ಘಟಕದ ಖಜಾಂಚಿ ಶ್ರೀಶೈಲ ಚಿಕನಳ್ಳಿ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಜಂಟಿ ಕಾರ್ಯದರ್ಶಿ ವಾಯ್ ಸಿ ಮೇಲಿನಮನಿ, ಸಂತೋಷ ಪಾಟೀಲ, ಪಾರ್ಶ್ವನಾಥ ಹೊಸಮನಿ. ಎಸ್.ಬಿ.ನಾಯಕ, ರೇಣುಕಾ ಎಸ್. ಗೀತಾ ಬಂಡಿ, ತುಪ್ಪದ, ಎಸ್.ವ್ಹಿ. ಪಾಟೀಲ, ಎಮ್.ಕೆ.ಚವ್ಹಾಣ, ಪ್ರಕಾಶ ಬಡಿಗೇರ. ಎಸ್ ಎಸ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ