ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆ

 ಹಾವೇರಿ: ನಗರದ ಹೊರವಲಯದಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆ ಜರುಗಿತು

 ಈ ವೇಳೆ ಇತ್ತೀಚೆಗೆ ನಿಧನರಾದ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ ಅವರಿಗೆ ಸಂತಾಪ ಸೂಚಿಸಲಾಯಿತು. ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು. ಜೊತೆಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರಿಗೆ ನೀಡಿದ್ದ ಸಚಿವ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ಸರ್ಕಾರ ತನ್ನ ನಿಲುವನ್ನು ಪುನರ್ ಪರಿಶೀಲಿಸಬೇಕೆಂದು ಮನವಿ ಮಾಡಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಎಲ್ಲ ತಾಲೂಕುಗಳ ಕಸಾಪ ಅಧ್ಯಕ್ಷರಾದಬಿ.ಎಂ.ಜಗಾಪುರ, ಎನ್.ಸುರೇಶಕುಮಾರ, ವೈ.ಬಿ.ಆಲದಕಟ್ಟಿ, ಸಿ.ಎನ್.ಪಾಟೀಲ, ನಾಗಪ್ಪ ಬೆಂತೂರ, ರಾಜು ಹರವಿಶೆಟ್ಟರ, ಷಣ್ಮುಖಪ್ಪ ಮುಚ್ಚಂಡಿ, ಪ್ರಭಾಕರ ಶಿಗ್ಲಿ ಹಾಗೂ ಎಲ್ಲ ಹೋಬಳಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌ಗಳು