ಚಲನ ಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

ಡಾಂಗೆ ಎಜ್ಯುಕೇಶನ್ ಸೊಸೈಟಿಯ ವಾರ್ಷಿಕೋತ್ಸವ

 ಹಾವೇರಿ: ನಗರದ ಶ್ರೀ ಸಿದ್ಧರಾಮೇಶ್ವರ ಸಭಾ ಭವನದಲ್ಲಿ ಜರುಗಿದ ಡಾಂಗೆ ಎಜ್ಯುಕೇಶನ್ ಸೊಸೈಟಿಯ ಐದನೇ ವಾರ್ಷಿಕೋತ್ಸವ, ೨೦೨೫-೨೬ನೇ ಸಾಲಿನ ದೀಪಧಾರಣೆ ಹಾಗೂ ಸಾಂಸ್ಕೃತಿಕ ಕಲಾ ವೈಭವ ಸಮಾರಂಭವನ್ನು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು.

 ಈ ವೇಳೆ ಮಾತನಾಡಿದ ಅವರು, ಡಾ.ಸಂಜಯಕುಮಾರ ಡಾಂಗೆ ತಮ್ಮ ಸತತ ಪ್ರಯತ್ನದಿಂದ ಆರೋಗ್ಯ ಸೇವೆಗೆ ಶ್ರಮಿಸುತ್ತಿರುವರು. ನರ್ಸಿಂಗ್, ಪ್ಯಾರಾ ಮೆಡಿಕಲ್ ಹಾಗೂ ಹೆಲ್ತ್ ಸೈನ್ಸ್ ಕ್ಷೇತ್ರದ ವೃದ್ಧಿಗೆ ಗಣನೀಯ ಸೇವೆ ಸಲ್ಲಿಸುತ್ತಿರುವರು. ಶೈಕ್ಷಣಿಕ ಕಾಳಜಿಯಿಂದ ಸಮಾಜ ಸೇವೆ ಮಾಡುತ್ತಿರುವ ಅವರ ಸೇವೆ ನಿರಂತರವಾಗಿರಲಿ ಎಂದು ಆಶಿಸಿದರು.

 ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ರೋಗಿಗಳ ಮನೋಧೈರ್ಯ ಹೆಚ್ಚಿಸುವ ಶುಶ್ರೋಷಕರ ಬಗ್ಗೆ ಕೀಳರಿಮೆ ಸಲ್ಲದು. ಈ ಹಿನ್ನೆಲೆಯಲ್ಲಿ ತಾವು ಪ್ರಮಾಣ ವಚನ ಸ್ವೀಕರಿಸಿದಂತೆ ವೃತ್ತಿಗೆ ಯಾವುದೇ ಧಕ್ಕೆ ಬಾರದಂತೆ ನಡೆದುಕೊಳ್ಳಿರಿ. ರೋಗಿಗಳನ್ನು ದೇವರೆಂದು ಭಾವಿಸಿರಿ. ನಿಮ್ಮ ಜೀವನವನ್ನು ಆದರ್ಶವಾಗಿಟ್ಟುಕೊಳ್ಳಿ ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಸಂಜಯಕುಮಾರ ಡಾಂಗೆ, ಕಳೆದ ಮೂರು ದಶಕಗಳಿಂದ ಚರ್ಮ ರೋಗ ತಜ್ಞನಾಗಿ ಸೇವೆ ಸಲ್ಲಿಸುತ್ತಿರುವೆ. ಈ ಭಾಗದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ಶುಶ್ರೋಷಕರ ಕೊರತೆ ಇತ್ತು. ಈ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಡಾಂಗೆ ಎಜ್ಯುಕೇಶನ್ ಸೊಸೈಟಿ ಮೂಲಕ ಶುಶ್ರೋಷಕರಿಗೆ ತರಬೇತಿ ನೀಡಲಾಗುತ್ತಿದೆ. ವೈದ್ಯರು ಮತ್ತು ಶುಶ್ರೋಷಕರ ಮೇಲೆ ಜನರ ವಿಶ್ವಾಸ ಇರಬೇಕು. ಅಂದಾಗ ಮಾತ್ರ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯ. ಎಂದರು.

ಹಾವೇರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಂ.ಎಂ.ಹಿರೇಮಠ ಮಾತನಾಡಿ, ಡಾ.ಸಂಜಯಕುಮಾರ ಡಾಂಗೆ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಪ್ರಯತ್ನ ಮಾಡಿ ಯಶಸ್ವಿಯಾಗಿರುವರು. ಅವರ ಶೈಕ್ಷಣಿಕ ಕ್ಷೇತ್ರದಲ್ಲಿನ ಪ್ರಗತಿ ಇನ್ನಷ್ಟು ಹೆಚ್ಚಲಿ ಎಂದರು.

 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಸೇವೆ ಸಲ್ಲಿಸಲು ಹಿಂದೇಟು ಹಾಕುವ ಸಂದರ್ಭದಲ್ಲಿ ಡಾ.ಡಾಂಗೆ ಅವರ ಗ್ರಾಮೀಣ ಜನತೆಯ ಆರೋಗ್ಯಕ್ಕೆ ಶ್ರಮಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

 ಹುಕ್ಕೇರಿಮಠದ ಶ್ರೀ ಸದಾಶಿವ ಮಹಾಸ್ವಾಮೀಜಿ ಹಾಗೂ ಬೌದ್ಧ ಬಿಕ್ಕು ಕಮಲನಾಥ್ ಬಂಥೇಜಿ ಸಾನ್ನಿಧ್ಯ ವಹಿಸಿದ್ದರು. ಡಾ.ಸಂಜಯಕುಮಾರ ಡಾಂಗೆ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ.ಮೈದೂರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮ ಅಡಕಿ, ಮುಖಂಡರಾದ ಸಿ.ಬಿ.ಕುರವತ್ತಿಗೌಡ್ರ, ಮಲ್ಲೇಶಪ್ಪ ಪಟ್ಟಣಶೆಟ್ಟಿ, ಬಸಣ್ಣ ಹೆಡಿಗೊಂಡ, ಶಂಕ್ರಣ್ಣ ಮಕರಬ್ಬಿ, ಶ್ರೀಧರ ದೊಡ್ಡಮನಿ, ಸಾಹಿತಿ ಹನುಮಂತಗೌಡ ಗೊಲ್ಲರ, ಪ್ರಾಂಶುಪಾಲೆ ಸರಸ್ವತಿ ವೈ.ಎಚ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರವಿಕುಮಾರ ಟಿ, ರಬ್ಬಾನಿ ಹುಲಗೇರಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಇದಕ್ಕೂ ಮುನ್ನ ವಿದ್ಯಾರ್ಥಿಗಳಿಂದ ದೀಪಧಾರಣೆ ಹಾಗೂ ಬಳಿಕ ಸಾಂಸ್ಕೃತಿಕ ಕಲಾ ವೈಭವ ಜರುಗಿತು. ನಾಗರಾಜ ನಡುವಿನಮಠ ಕಾರ್ಯಕ್ರಮ ನಿರ್ವಹಿಸಿದರು  ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌ಗಳು